HomeLatest NewsRAIN ALERT: ಭಾರಿ ಮಳೆ ಮುನ್ಸೂಚನೆ: 9 ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ

RAIN ALERT: ಭಾರಿ ಮಳೆ ಮುನ್ಸೂಚನೆ: 9 ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ ನೀಡಲಾಗಿದೆ. ಬೆಂಗಳೂರಿನಲ್ಲಿ ನಿನ್ನೆ ಸಂಜೆಯಿಂದ ಆರಂಭವಾದ ಮಳೆ ಒಂದೇ ಸಮನೆ ಸುರಿಯುತ್ತಲೇ ಇದೆ. ಇಂದು ಕೂಡ ಮಳೆ ಅಬ್ಬರ ಜೋರಾಗಲಿದೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದ್ದು, 9 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೊಷಿಸಲಾಗಿದೆ.

ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಹಾವೇರಿ, ಧಾರವಾಡ, ಬೀದರ್, ಕಲಬುರಗಿ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular