HomeLatest NewsRAIN ALERT: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇನ್ನೂ ನಾಲ್ಕು ದಿನ ಭಾರಿ ಮಳೆ: ಅಲರ್ಟ್...

RAIN ALERT: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇನ್ನೂ ನಾಲ್ಕು ದಿನ ಭಾರಿ ಮಳೆ: ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇನ್ನೂ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಣ್ದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ಸೆಪ್ಟೆಂಬರ್ 24ರವರೆಗೂ ಮಳೆ ಅಬ್ಬರ ಮುಂದುವರೆಯಲಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ತುಮಕೂರು, ಕೋಲಾರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನು ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಳಗಾವಿ, ಕಲಬುರಗಿ, ಯಾದಗಿರಿ, ಬೀದರ್, ರಾಯಚೂರು, ಬಾಗಲಕೋಟೆ, ಬಳ್ಳಾರಿ, ಧಾರವಾಡ, ವಿಜಯನಗರ, ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ದಾವಣಗೆರೆ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ.

For Latest News Updates, Join Our Whatsapp Community🚩
RELATED ARTICLES

Most Popular