HomeLatest NewsRAIN ALERT: ರಾಜ್ಯದಲ್ಲಿ ಮತ್ತೆ ಹೆಚ್ಚಲಿದೆ ಮಳೆ ಅಬ್ಬರ: ಕೆಲ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

RAIN ALERT: ರಾಜ್ಯದಲ್ಲಿ ಮತ್ತೆ ಹೆಚ್ಚಲಿದೆ ಮಳೆ ಅಬ್ಬರ: ಕೆಲ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ ಹೆಚ್ಚಾಗುವ ಸಾಧ್ಯತೆ ಇದೆ. ಉತ್ತರ ಕರ್ನಾಟಕ ಭಾಗದ ಹಲವೆಡೆ ಧಾರಾಕಾರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ಥಗೊಂಡಿದೆ. ಹೊಲ, ಗದ್ದೆಗಳು ಸಂಪೂರ್ಣ ಜಲಾವೃತಗೊಂಡಿದ್ದು, ಜೀವನವೇ ದುಸ್ಥರವಾಗಿದೆ.

ರಾಜ್ಯದಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆ ಮುಂದುವರೆಯಲಿದೆ. ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ಮಳೆ ಹೆಚ್ಚಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರದಲ್ಲಿ ಮಳೆಯಾಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ.

For Latest News Updates, Join Our Whatsapp Community🚩
RELATED ARTICLES

Most Popular