HomeLatest NewsRAIN ALERT: ಭಾರಿ ಮಳೆ ಮುನ್ಸೂಚನೆ: ಐದು ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ

RAIN ALERT: ಭಾರಿ ಮಳೆ ಮುನ್ಸೂಚನೆ: ಐದು ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ ಜೋರಾಗಿದೆ. ಉತ್ತರ ಒಳನಾಡಿನಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಯಚೂರು, ಯಾದಗಿರಿ, ಕಲಬುರಗಿ, ಬೀದರ್, ವಿಜಯಪುರ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿಯೂ ಮಳೆಯಾಗಲಿದ್ದು, ಸೆಪ್ಟೆಂಬರ್ 27ರವರೆಗೆ ಮಳೆಯಾಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ಹಾವೇರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ರಾತ್ರಿಯಿಡಿ ಮಳೆ ಸುರಿದಿದ್ದು, ಮೋಡಕವಿದ ವಾತಾವರಣವಿದೆ. ಸಂಜೆ ವೇಳೆಗೆ ಮತ್ತೆ ಮಳೆಯಾಗುವ ಸಾಧ್ಯತೆ ದಟ್ಟವಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular