HomeLatest NewsRAIN ALERT: ರಾಜ್ಯದಲ್ಲಿ ಮುಂದಿನ ಒಂದು ವಾರ ಮಳೆ: 7 ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ

RAIN ALERT: ರಾಜ್ಯದಲ್ಲಿ ಮುಂದಿನ ಒಂದು ವಾರ ಮಳೆ: 7 ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಕಡೆಗಳಲ್ಲಿ ಮುಂದಿನ ಒಂದುವಾರಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಉತ್ತರ ಕರ್ನಾಟಕ ಭಾಗದಲ್ಲಿ ಮುಂಗಾರು ಚುಕುಗೊಂಡಿದ್ದು, 7 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೀದರ್, ಬಾಗಲಕೋಟೆ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 27ರವರೆಗೆ ಧಾರಾಕಾರ ಮಳೆಯಾಗಲಿದೆ. ಶಿವಮೊಗ, ಚಿಕ್ಕಮಗಳೂರು, ಕೊಡಗು, ಹಾಸನ ಜಿಲ್ಲೆಗಳಲ್ಲಿಯೂ ಸೆ.೨೭ರವರೆಗೆ ಮಳೆಯಾಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಧಾರವಾಡ, ಬೆಳಗಾವಿ, ಗದಗ, ವಿಜಯನಗರ, ಹಾವೇರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ.

For Latest News Updates, Join Our Whatsapp Community🚩
RELATED ARTICLES

Most Popular