ಬೆಂಗಳೂರು: ರಾಜ್ಯದಲ್ಲಿ ಮತ್ತೆ ವರುಣಾರ್ಭಟ ಆರಂಭವಾಗಿದ್ದು, ಇಂದು 14 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
ಸೆಪ್ಟೆಂಬರ್ ೩೦ರವರೆಗೆ ಚಂಡಮಾರುತದ ಪರಿಣಾಮ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ. ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಜಿಲ್ಲೆಗಳಲ್ಲಿ ಗಂಟೆಗೆ 50-60 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಚಂಡಮಾರುತ, ಗಾಳಿ, ಮಳೆಯಿಂದಾಗಿ ಅರಬ್ಬಿ ಸಮುದ್ರ ಪ್ರಕ್ಷುಬ್ಧಗೊಳ್ಳಲಿದೆ.
ಇನ್ನು ಬೆಂಗಳೂರು, ಹಾವೇರಿ, ಧಾರವಾಡ, ಚಿತ್ರದುರ್ಗ, ದಾವಘೆರೆ, ಕೋಲಾರ, ರಾಮನಗರ, ಮೈಸೂರು, ಚಾಮರಾಜನಗರ, ಶಿವಮೊಗ್ಗ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ. ಇನ್ನು ಕಲಬುರಗಿ, ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ರಾಯಚೂರು, ಕೊಪ್ಪಳ, ವಿಜಯನಗರ, ವಿಜಯಪುರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಆರೇಂಜ್ ಅಲರ್ಟ್ ಘೋಷಿಸಲಾಗಿದೆ.