ಬೆಂಗಳೂರು: ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಈ ನಡುವೆ ಇಂದಿನಿಂದ ಮುಂದಿನ ಐದು ದಿನಗಳವರೆಗೆ ಕೆಲ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉಅದ್ಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೊಪ್ಪಳ, ಗದಗ, ವಿಜಯಪುರ, ಬಾಗಲಕೋಟೆ, ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ.
ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ.