HomeLatest NewsRAIN ALERT: ಕರಾವಳಿ ಜಿಲ್ಲೆಗಳು ಸೇರಿದಂತೆ ಹಲವೆಡೆ ಭಾರಿ ಮಳೆ ಮುನ್ಸೂಚನೆ

RAIN ALERT: ಕರಾವಳಿ ಜಿಲ್ಲೆಗಳು ಸೇರಿದಂತೆ ಹಲವೆಡೆ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ಕರ್ನಾಟಕದ ಕರಾವಳಿ ಜಿಲ್ಲೆಗಳು, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳು ವರುಣಾರ್ಭಟಕ್ಕೆ ತತ್ತರಿಸಿ ಹೋಗಿದ್ದು, ಕರಾವಳಿ ಜಿಲ್ಲೆಗಳಲ್ಲಿಯೂ ಕೆಲ ದಿನಗಳಿಂದ ಧಾರಾಕಾರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ನಡುವೆ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳುರು, ಶಿವಮೊಗ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮಂಡ್ಯ, ಮೈಸೂರು, ಕೋಲಾರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ತುಮಕೂರು, ಕೊಡಗು ಜಿಲ್ಲೆಗಳಲ್ಲಿ ಮಳೆಯಾಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಳಗಾವಿ, ಬಾಗಲಕೋಟೆ, ಕಲಬುರಗಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿಯೂ ಮಳೆ ಮುಂದುವರೆಯಲಿದೆ.

For Latest News Updates, Join Our Whatsapp Community🚩
RELATED ARTICLES

Most Popular