HomeLatest NewsRAIN ALERT: ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನಗಳ ಕಾಲ ಭಾರಿ...

RAIN ALERT: ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನಗಳ ಕಾಲ ಭಾರಿ ಮಳೆ

ಬೆಂಗಳೂರು: ಬೆಂಗಳೂರಿನಲ್ಲಿ ರಾತ್ರಿಯಿಡಿ ಸುರುದ ಮಳೆಗೆ ಜನರು ಕಂಗಾಲಾಗಿದ್ದಾರೆ. ಈ ನಡುವೆ ಇನ್ನೂ ಎರಡು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ಸೇರಿದಂತೆ ರಾಜ್ಯದ 25ಜಿಲ್ಲೆಗಳಲ್ಲಿ ಅಕ್ಟೋಬರ್ 11ರವರೆಗೂ ಧಾರಾಕಾರ ಮಳೆ ಮುಂದುವರೆಯಲಿದೆ. ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ವಿಜಯಪುರ, ವಿಜಯನಗರ, ಯಾದಗಿರಿ, ಬಳ್ಳಾರಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿಯೂ ಮಳೆ ಅಬ್ಬರಿಸಲಿದೆ.

For Latest News Updates, Join Our Whatsapp Community🚩
RELATED ARTICLES

Most Popular