HomeLatest NewsRAIN ALERT: ರಾಜ್ಯದಲ್ಲಿ ಇನ್ನೂ ಎರಡು ದಿನ ಭಾರಿ ಮಳೆ: 14 ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ

RAIN ALERT: ರಾಜ್ಯದಲ್ಲಿ ಇನ್ನೂ ಎರಡು ದಿನ ಭಾರಿ ಮಳೆ: 14 ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮಳೆಯ ಅಬ್ಬರ ಜೋರಾಗಿದೆ. ಕಳೆದ ನಾಲ್ಕು ದಿನಗಳಿಂದ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವರುಣಾರ್ಭಟ ಹೆಚ್ಚಿದ್ದು, ಇನ್ನೂ ಎರಡು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅಕ್ಟೋಬರ್ 14ರವರೆಗೂ ಮಳೆ ಮುಂದುವರೆಯಲಿದ್ದು, ಅಕ್ಟೋಬರ್ 14ರ ಬಳಿಕ ಮಳೆ ಅಬ್ಬರ ಕೊಂಚ ಕಡಿಮೆಯಾಗಲಿದೆ. ಅಕ್ಟೋಬರ್ 13ರವರೆಗೆ ರಾಜ್ಯದಲ್ಲಿ ಭಾರಿ ಮಳೆಯಾಗಲಿದ್ದು, ಕೆಲವೆಡೆ ಭೂಕುಸಿತ ಸಂಭವವಿದೆ. 14 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ದಕ್ಷಿಣ ಕನ್ನಡ, ತುಮಕೂರು, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ,. ಚಿಕ್ಕಬಳ್ಳಾಪುರ, , ಚಾಮರಾಜನಗರ, ಕೋಲಾರ ಜಿಲ್ಲೆಗಳಲ್ಲಿ ಭಾರ್ ಮಳೆಯಾಗುವ ಸಾಧ್ಯತೆ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ. ಚಿತ್ರದುರ್ಗ, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು ಭಾಗಗಳಲ್ಲಿ ಸಾಧಾರಣ ಮಳೆಯಾಗಲಿದೆ.

For Latest News Updates, Join Our Whatsapp Community🚩
RELATED ARTICLES

Most Popular