HomeLatest NewsRAIN ALERT: ರಾಜ್ಯದಲ್ಲಿ ತಗ್ಗಿದ ಮಳೆಯ ಅಬ್ಬರ: ಆದರೂ ನಾಲ್ಕು ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ

RAIN ALERT: ರಾಜ್ಯದಲ್ಲಿ ತಗ್ಗಿದ ಮಳೆಯ ಅಬ್ಬರ: ಆದರೂ ನಾಲ್ಕು ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಅಬ್ಬರ ಕಡಿಮೆಯಾಗಿದೆ. ಬಹುತೇಕ ಜಿಲ್ಲೆಗಳಲ್ಲಿ ವರುಣಾರ್ಭಟ ತಗ್ಗಿದ್ದು, ಕೆಲ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ಜಿಲ್ಲೆಗಳಲ್ಲಿ ಕಡಿಮೆ ಪ್ರಮಾಣದ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಸಂಜೆ ವೇಳೆಗೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಮೀಸೂರು, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ರಾಮನಗರ, ತುಮಕೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದೆ. ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ವಿಜಯಪುರ ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣವಿರಲಿದೆ.

For Latest News Updates, Join Our Whatsapp Community🚩
RELATED ARTICLES

Most Popular