HomeLatest NewsRAIN ALERT: ರಾಜ್ಯದಲ್ಲಿ ಸಾಧಾರಣ ಮಳೆ: 20 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

RAIN ALERT: ರಾಜ್ಯದಲ್ಲಿ ಸಾಧಾರಣ ಮಳೆ: 20 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಅಬ್ಬರ ತಗ್ಗಿದೆ. ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, 20 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕಲ್ಯಾಣ ಕರ್ನಾಟಕ ಹಾಗೂ ಉತ್ತರ ಕರ್ನಾಟಕ ಭಾಗದಲ್ಲಿ ಮಳೆಯಾಗಲಿದೆ. ಕೊಡಗು, ಚಿಕ್ಕಮಗಳೂರು, ಹಾಸನ, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ತುಮಕೂರು, ದಾವಣಗೆರೆ, ಚಿತ್ರದುರ್ಗ, ವಿಜಯನಗರ, ಕೋಲಾರ, ಯಾದಗಿರಿ, ಕಲಬುರಗಿ, ರಾಯಚೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಬೆಳ್ಳಾರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಕೊಪ್ಪಳ, ಹಾವೇರಿ, ವಿಜಯಪುರ ಜಿಲ್ಲೆಗಳಲ್ಲಿ ಒಣಹವೆ ಕೆಲವೆಡೆ ಮೋಡಕವಿದ ವಾತಾವರಣವಿರಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular