HomeLatest NewsRAIN ALERT: ಭಾರಿ ಮಳೆ ಮುನ್ಸೂಚನೆ: ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ; ಹಲವು ಜಿಲ್ಲೆಗಳಲ್ಲಿ ಅಲರ್ಟ್...

RAIN ALERT: ಭಾರಿ ಮಳೆ ಮುನ್ಸೂಚನೆ: ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ; ಹಲವು ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 25 ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕರಾವಳಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಳಗಾವಿ, ಧಾರವಾಡ, ಗಡಗ, ಹಾವೇರಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗುಡುಗು ಮಳೆಯಾಗಲಿದೆ. ಕಲಬುರಗಿ, ಬಾಗಲಕೋಟೆ, ಬೀದರ್, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಾಗೂ ಕೊಡಗು, ಹಾಸನ, ಮೈಸೂರು ಜಿಲ್ಲೆಗಳಲ್ಲಿ ಬಿರುಗಾಳಿ, ಗುಡುಗು ಸಹಿತ ಮಳೆಯಾಗಲಿದೆ. ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಶಿವಮೊಗ್ಗ, ದಾವಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ.

For Latest News Updates, Join Our Whatsapp Community🚩
RELATED ARTICLES

Most Popular