HomeUncategorizedKarnataka Rain: ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದುವರೆದ ಮಳೆ; ದಕ್ಷಿಣ ಒಳನಾಡಿನಲ್ಲಿ ಒಣಹವೆ

Karnataka Rain: ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದುವರೆದ ಮಳೆ; ದಕ್ಷಿಣ ಒಳನಾಡಿನಲ್ಲಿ ಒಣಹವೆ

ಬೆಂಗಳೂರು: ಮೊಂಥಾ ಚಂಡಮಾರುತದ ಅಬ್ಬರ ಕಡಿಮೆಯಾದರೂ ರಾಜ್ಯ ಕೆಲ ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದೆ. ಆದರೆ ಮಳೆಯ ಆರ್ಭಟ ಕಡಿಮೆಯಾಗಿದೆ.

ಇಂದು ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿದಂತೆ ಕೆಲವೆಡೆ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನಲ್ಲಿ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಿರಲಿದೆ.

ಬೀದರ್, ಕಲಬುರಗಿ. ವಿಜಯಪುರ ಜಿಲ್ಲೆಗಳಲ್ಲಿ ಮಳೆ ಕೊಂಚ ಜೋರಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಯಾದಗಿರಿ, ರಾಯಚೂರು, ಕೊಪ್ಪಳ, ಹಾವೇರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಅಮ್ಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.

For Latest News Updates, Join Our Whatsapp Community🚩
RELATED ARTICLES

Most Popular