HomeLatest NewsBIG NEWS: ಕಡಿಮೆಯಾದ ಮಳೆಯ ಅಬ್ಬರ: ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆ; ಉಳಿದೆಡೆ ಒಣಹವೆ

BIG NEWS: ಕಡಿಮೆಯಾದ ಮಳೆಯ ಅಬ್ಬರ: ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆ; ಉಳಿದೆಡೆ ಒಣಹವೆ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಅಬ್ಬರ ಕಡಿಮೆಯಾಗಿದೆ. ಆದರೂ ಕರಾವಳಿ ಜಿಲ್ಲೆಗಳಲ್ಲಿ ಮಾತ್ರ ಸಾಧಾರಣ ಮಳೆ ಮುಂದುವರೆದಿದೆ. ಉಳಿದಂತೆ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಆರಂಭವಾಗಿದೆ.

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಣ್ಣ ಪ್ರಮಾಣದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿಇದೆ.

ಉತ್ತರ ಒಳನಾಡು ಭಾಗದ ಬೆಳಗಾವಿ, ಬೀದರ್, ಬಾಗಲಕೋಟೆ, ವಿಜಯಪುರ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ತುಮಕೂರು, ಹಾಸನ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿಯೂ ಅಲ್ಲಲ್ಲಿ ಮೋಡಕವಿದ ವಾತಾವರಣ, ಒಣಹವೆ ಇರುವ ಸಾಧ್ಯತೆ ಇದೆ.

For Latest News Updates, Join Our Whatsapp Community🚩
RELATED ARTICLES

Most Popular