HomeLatest NewsBIG NEWS: ರಾಜ್ಯದಲ್ಲಿ ಮತ್ತೆ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ: ದಕ್ಷಿಣ ಒಳನಾಡು, ಕರಾವಳಿ...

BIG NEWS: ರಾಜ್ಯದಲ್ಲಿ ಮತ್ತೆ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ: ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನವೆಂಬರ್ 17ರಿಂದ ಎರಡು ದಿನಗಳ ಕಾಲ ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲಿ ಮಳೆಯಾಗಲಿದೆ.

ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಕಡೆ ಮೋಡಕವಿದ ವಾತಾವರಣವಿದ್ದು, ಚಳಿ ಆರಂಭವಾಗಿದೆ. ನವೆಂಬರ್ 17ರಿಂದ ದಕ್ಷಿಣ ಒಳನಾಡು ಜಿಲ್ಲೆಗಳು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಾಮರಾಜನಗರ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಮೈಸೂರು, ಹಾಸನ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಚಿತ್ರದುರ್ಗ, ದಾವಣಗೆರೆ, ತುಮಕೂರು, ವಿಜಯನಗರ, ವಿಜಯಪುರ, ಯಾದಗಿರಿ, ಕೊಪ್ಪಳ, ಕಲಬುರಗಿ, ಗದಗ, ಧಾರವಾಡ, ಹಾವೇರಿ, ಬೆಳಗಾವಿ, ಬೀದರ್, ಬಾಗಲಕೋಟೆ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular