HomeLatest NewsKarnataka Weather: ಮುಂದಿನ ಮೂರು ದಿನಗಳಲ್ಲಿ ರಾಜ್ಯದ ವಿವಿಧೆಡೆ ಮೈಕೊರೆವ ಚಳಿ ಜೊತೆಗೆ ಮಳೆ: ಹವಾಮಾನ...

Karnataka Weather: ಮುಂದಿನ ಮೂರು ದಿನಗಳಲ್ಲಿ ರಾಜ್ಯದ ವಿವಿಧೆಡೆ ಮೈಕೊರೆವ ಚಳಿ ಜೊತೆಗೆ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ್ಯಲ್ಲಿ ಮೈಕೊರೆವ ಚಳಿ ಜೊತೆಗೆ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಮುಂಜಾನೆ ತುಮ್ತುರು ಮಳೆಯಾಗಿತ್ತು. ಇದೀಗ ಮುಂದಿನ ಮೂರು ದಿನಗಳಲ್ಲಿ ರಾಅಜ್ಯದ ಕೆಲ ಜಿಲ್ಲೆಗಳಲ್ಲಿ ಚಳಿಯ ಜೊತೆಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು ಮತ್ತು ದಕ್ಷಿಣ ಒಳನಾಡಿನಲ್ಲಿ ಮೋಡಕವಿದ ವಾತಾವರಣವಿದ್ದು, ತುಂತುರು ಮಳೆಯಾಗಲಿದೆ.

ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆ ಸಾಧ್ಯತೆ ಕಡಿಮೆ, ಚಳಿ ಪ್ರಮಾಣ ಹೆಚ್ಚಾಗಲಿದೆ. ಉತ್ತರ ಒಳನಾಡಿನ ಕಲಬುರಗಿ, ಬೀದರ್, ಬಾಗಲಕೋಟೆ ಜಿಲ್ಲೆಯಲ್ಲಿ ಚಳಿ ಮುಂದುವರೆಯಲಿದೆ. ದಾವಣಗೆರೆ, ಚಿತ್ರದುರ್ಗ, ಬಳ್ಳಾರಿಯಲ್ಲಿ ಇಂದು ಒಣಹವೆ ಇರಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುಂದಿನ ಮೂರು ದಿನಗಳಲ್ಲಿ ರಾಜ್ಯದ ಕೆಲವೆಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮಂಡ್ಯ, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ, ತುಮಕೂರು, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಹಾಸನ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಒಣಹವೆ ಇರಲಿದೆ. ಹಾವೇರಿ, ವಿಜಯಪುರ, ಗದಗ,ಕೊಪ್ಪಳ, ರಾಯಚೂರು, ಯಾದಗಿರಿ, ಧಾರವಾಡ ಜಿಲ್ಲೆಗಳಲ್ಲಿ ಚಳಿ ಮುಂದುವರೆಯಲಿದೆ.

For Latest News Updates, Join Our Whatsapp Community🚩
RELATED ARTICLES

Most Popular