HomeLatest NewsRAIN ALERT: ಆಗಸ್ಟ್ 20ರವರೆಗೂ ಭಾರಿ ಮಳೆ ಮುನ್ಸೂಚನೆ: ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ

RAIN ALERT: ಆಗಸ್ಟ್ 20ರವರೆಗೂ ಭಾರಿ ಮಳೆ ಮುನ್ಸೂಚನೆ: ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ

ಬೆಂಗಳೂರು: ಕರ್ನಾಟಕದಲ್ಲಿ ಆಗಸ್ಟ್ 20ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂದಿನ ನಾಲ್ಕು ದಿನಗಳವರೆಗೆ ಕರ್ನಾಟಕದ ಉತ್ತರ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಅಲರ್ಟ್ ಘೋಷಿಸಲಾಗಿದೆ.

ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಹಾಗೂ ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಆಗಸ್ಟ್ 17ರಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳುರು ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆಗಸ್ಟ್ 18 ರಂದು ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಇನ್ನು ದಕ್ಷಿಣ ಕನ್ನಡ, ಹಾಸನ, ಕೊಡಗು, ಮೈಸೂರು, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರಿನಲ್ಲಿ ಆಗಸ್ಟ್ 19ರವರೆಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜ್ಯ ರಾಜಧಾನಿಯಲ್ಲಿ ಬಿರಿಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular