HomeLatest NewsRAIN ALERT: ರಾಜ್ಯದಲ್ಲಿ ಇಂದಿನಿಂದ ಕೊಂಚ ಕಡಿಮೆಯಾಗಲಿದೆ ವರುಣಾರ್ಭಟ: ಕೆಲ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಮುನ್ಸೂಚನೆ

RAIN ALERT: ರಾಜ್ಯದಲ್ಲಿ ಇಂದಿನಿಂದ ಕೊಂಚ ಕಡಿಮೆಯಾಗಲಿದೆ ವರುಣಾರ್ಭಟ: ಕೆಲ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಮುನ್ಸೂಚನೆ

ಬೆಂಗಳೂರು: ಕರ್ನಾಟಕದಲ್ಲಿ ಇಂದಿನಿಂದ ವರುಣಾರ್ಭಟ ಕೊಂಚ ಕಡಿಮೆಯಾಗಲಿದೆ. ಆದರೆ ಕೆಲ ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಖೆ ಮುನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಕರ್ನಾಟಕದ ಮೇಲೂ ಪರಿಣಾಮ ಬೀರುತ್ತಿದ್ದು, ರಾಜ್ಯದಲ್ಲಿ ಕೆಲ ದಿನಗಳಿಂದ ಭಾರಿ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ಈ ನಡುವೆ ಇಂದಿನಿಂದ ಕೊಂಚ ಮಳೆ ಅಬ್ಬರ ಕಡಿಮೆಯಾಗಲಿದೆ. ಕೆಲ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದಲ್ಲಿ ಸೆ.11ರವರೆಗೂ ಮಳೆ ಮುಂದುವರೆಯಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಾಗಲಕೋಟೆ, ಕೊಪ್ಪಳ,ರಾಯಚೂರು, ಕಲಬುರಗಿ, ಯಾದಗಿರಿ, ವಿಜಯಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ರಾಮನಗರ, ಮಂಡ್ಯ, ಮೈಸೂರು, ದಾವಣಗೆರೆ, ತುಮಕೂರು, ಕೋಲಾರ, ಕೊಡಗು ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

For Latest News Updates, Join Our Whatsapp Community🚩
RELATED ARTICLES

Most Popular