HomeLatest NewsRAIN ALERT: ರಾಜ್ಯದಲ್ಲಿ ತಗ್ಗಿದ ವರುಣಾರ್ಭಟ: ಆದರೂ ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದುವರೆಯಲಿದೆ ಮಳೆ

RAIN ALERT: ರಾಜ್ಯದಲ್ಲಿ ತಗ್ಗಿದ ವರುಣಾರ್ಭಟ: ಆದರೂ ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದುವರೆಯಲಿದೆ ಮಳೆ

ಬೆಂಗಳೂರು: ರಾಜ್ಯದ ಹಲವೆಡೆ ಮಳೆ ಅಬ್ಬರ ಕಡಿಮೆಯಾಗಿದೆ. ಉತ್ತರ ಒಳನಾಡಿನಲ್ಲಿ ಒಣಹವೆ ಇರಲಿದೆ. ಆದರೆ ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಈ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 13ರವರೆಗೂ ಮಳೆ ಮುಂದುವರೆಯಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ವಿಜಯನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಚಾಮರಾಜನಗರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಜಯಪುರ, ರಾಯಚೂರು, ಯಾದಗಿರಿ, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.

For Latest News Updates, Join Our Whatsapp Community🚩
RELATED ARTICLES

Most Popular