HomeLatest NewsRAIN ALERT: ಮತ್ತೆ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ: ರಾಜ್ಯದ 13 ಜಿಲ್ಲೆಗಳಲ್ಲಿ ಹೆಚ್ಚಲಿದೆ...

RAIN ALERT: ಮತ್ತೆ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ: ರಾಜ್ಯದ 13 ಜಿಲ್ಲೆಗಳಲ್ಲಿ ಹೆಚ್ಚಲಿದೆ ವರುಣಾರ್ಭಟ

ಬೆಂಗಳೂರು: ರಾಜ್ಯಾದ್ಯಂತ ಎರಡು ದಿನಗಳಿಂದ ಮಳೆಯ ಅಬ್ಬರ ಕಡಿಮೆಯಾಗಿದೆ. ಆದರೆ ಇನ್ನೆರಡು ದಿನಗಳಲ್ಲಿ ಮತ್ತೆ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 11ರಿಂದ ಮಳೆ ಅಬ್ಬರಿಸಲಿದೆ. ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ 13 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ಕೋಲಾರ, ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ರಾಯಚೂರು, ಕೊಪ್ಪಳ, ಹಾವೇರಿ, ಗದಗ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

For Latest News Updates, Join Our Whatsapp Community🚩
RELATED ARTICLES

Most Popular