HomeLatest NewsRAIN ALERT: ಧಾರಾಕಾರ ಮಳೆ: 14 ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ

RAIN ALERT: ಧಾರಾಕಾರ ಮಳೆ: 14 ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯಾದ್ಯಂತ ಮಳೆಯ ಅಬ್ಬರ ಜೋರಾಗಿದ್ದು, ಇಂದಿನಿಂದ ವರುಣಾರ್ಭಟ ಮತ್ತಷ್ಟು ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಭಾರಿ ಮಳೆ ಹಿನ್ನೆಲೆಯಲ್ಲಿ ರಾಜ್ಯದ 14 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೀದರ್, ಬೆಳಗಾವಿ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಮಗಳುರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಈ ಜಿಲ್ಲೆಗಳಲ್ಲಿ ಆಗಸ್ಟ್ 19ರವರೆಗೂ ಮಳೆಯಾಗಲಿದ್ದು, ಬಳಿಕ ಮಳೆಯ ಅಬ್ಬರ ಮತ್ತಷ್ಟು ಹೆಚ್ಚಲಿದೆ. ರಾಮನಗರ, ತುಮಕೂರು, ವಿಜಯನಗರ, ಮಂಡ್ಯ, ಮೈಸೂರು, ಕೋಲಾರ ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಗದಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular