HomeLatest NewsRAIN ELERT: ಮತ್ತಷ್ಟು ಚುರುಕುಗೊಂಡ ಮುಂಗಾರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೂರು ದಿನ ಭಾರಿ ಮಳೆ...

RAIN ELERT: ಮತ್ತಷ್ಟು ಚುರುಕುಗೊಂಡ ಮುಂಗಾರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೂರು ದಿನ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಮತ್ತಷ್ಟು ಚುರುಕುಗೊಂಡಿದ್ದು, ಮೂರು ದಿನಗಳ ಕಾಲ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ರಾಯಚೂರು, ಬೀದರ್, ಬೆಳಗಾವಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ, ಹಾಸನ, ಚಿಕ್ಕಬಳ್ಳಾಪುರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಧಾರವಾಡ, ಬಳ್ಳಾರಿ, ಗದಗ, ಕೊಪ್ಪಳ, ಯಾದಗಿರಿ, ಕಲಬುರಗಿ, ವಿಜಯಪುರ, ವಿಜಯನಗರ, ಬಾಗಲಕೋಟೆ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ.

For Latest News Updates, Join Our Whatsapp Community🚩
RELATED ARTICLES

Most Popular