HomeLatest NewsRAIN ALERT: ರಾಜ್ಯದಲ್ಲಿ ಹೆಚ್ಚಲಿದೆ ಮಳೆ ಅಬ್ಬರ: ಯೆಲ್ಲೋ ಅಲರ್ಟ್ ಘೋಷಣೆ!

RAIN ALERT: ರಾಜ್ಯದಲ್ಲಿ ಹೆಚ್ಚಲಿದೆ ಮಳೆ ಅಬ್ಬರ: ಯೆಲ್ಲೋ ಅಲರ್ಟ್ ಘೋಷಣೆ!

ಬೆಂಗಳೂರು: ರಾಜ್ಯಾದ್ಯಂತ ಸದ್ಯ ಮಳೆಯ ಅಬ್ಬರ ಕೊಂಚ ಕಡಿಮೆಯಾಗಿದೆ. ಆದರೆ ಜುಲೈ 3ರ ಬಳಿಕ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಸಾಧಾರಣ ಮಳೆಯಾಗಲಿದೆ. ಆದರೆ ಜುಲೈ 3ರ ಬಳಿಕ ವರುಣಾರ್ಭಟ ಹೆಚ್ಚಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ಕಲಬುರಗಿ, ವಿಜಯನಗರ, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಬಳ್ಳಾಪುರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದಕ್ಷಿಣ ಒಳನಾಡಿನಲ್ಲಿ ಜುಲೈ 3ರಿಂದ ಮಳೆ ಪ್ರಮಾಣ ಹೆಚ್ಚಾಗಲಿದೆ. ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular