ಬೆಂಗಳೂರು: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಒಂದು ವಾರಗಳ ಕಾಲ ಭಾರಿ ಮಳೆಯಾಗಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲಿ ಯೆಲ್ಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಳಗಾವಿ, ಬೀದರ್, ಬಾಗಲಕೋಟೆ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಹಾಸನ, ಕೊಡಗು, ಮೈಸೂರು, ಕೋಲಾರ, ತುಮಕೂರು, ವಿಜಯನಗರ, ಮಂಡ್ಯ, ರಾಮನಗರದ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.