HomeLatest Newsರಾಜ್ಯಾದ್ಯಂತ ಚುರುಕುಗೊಂಡ ಮುಂಗಾರು: ಜುಲೈ 17ರವರೆಗೂ ಇರಲಿದೆ ಮಳೆಯ ಅಬ್ಬರ; ಕೆಲ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ

ರಾಜ್ಯಾದ್ಯಂತ ಚುರುಕುಗೊಂಡ ಮುಂಗಾರು: ಜುಲೈ 17ರವರೆಗೂ ಇರಲಿದೆ ಮಳೆಯ ಅಬ್ಬರ; ಕೆಲ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯಾದ್ಯಂತ ಮುಂಗಾರು ಮತ್ತಷ್ಟು ಚುರುಕುಗೊಂಡಿದೆ. ಕರಾಅವಳಿ ಜಿಲ್ಲೆಗಳಲ್ಲಿ ಭಾಅರಿ ಮಳೆಯಾಗಲಿದ್ದು, ಅಲರ್ಟ್ ಘೋಷಿಸಲಾಗಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಈ ಮೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಚಿಕ್ಕಮಗಳುರು, ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ ಎಂದು ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular