HomeLatest NewsRAIN ALERT: ಮತ್ತೆ ಮಳೆ ಅಬ್ಬರದ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ: ಬೆಂಗಳೂರಿನಲ್ಲಿ ಅಲರ್ಟ್ ಘೋಷಣೆ!

RAIN ALERT: ಮತ್ತೆ ಮಳೆ ಅಬ್ಬರದ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ: ಬೆಂಗಳೂರಿನಲ್ಲಿ ಅಲರ್ಟ್ ಘೋಷಣೆ!

ಬೆಂಗಳೂರು: ರಾಜ್ಯಾದ್ಯಂತ ಮಳೆ ಅಬ್ಬರ ಕೊಂಚ ಕಡಿಮೆಯಾಗಿದೆ. ಆದರೆ ಮುಂದಿನ ಮೂರು ದಿನಗಳ ಬಳಿಕ ವರುಣಾರ್ಭಟ ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯ ರಾಜಧಾನಿ ಬೆಂಗಳುರಿನಲ್ಲಿ ಆಗಸ್ಟ್ 6ರಬಳಿಕ ಭಾರಿ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ ಜಿಲ್ಲೆಗಳಲ್ಲಿಯೂ ಧಾರಾಕಾರ ಮಳೆಯಾಗಲಿದ್ದು, ಆರೇಂಜ್ ಅಲರ್ಟ್ ಘೋಷಿಸಲಾಗಿದೆ.

ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ, ಬೆಂಗಖೂರು ನಗರ, ಕೊಪ್ಪಳ, ಗದಗ, ಹಾವೇರಿ, ಧಾರವಾಡ, ಹಾವೇರಿ ಬೆಳಗಾವಿ, ರಾಯಚೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಯಾದಗಿರಿ, ವಿಜಯಪುರ, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

For Latest News Updates, Join Our Whatsapp Community🚩
RELATED ARTICLES

Most Popular