HomeLatest NewsRAIN ALERT: ರಾಜ್ಯದ 19 ಜಿಲ್ಲೆಗಳಲ್ಲಿ ಭಾರಿ ಮಳೆ: ಅಲರ್ಟ್ ಘೋಷಣೆ

RAIN ALERT: ರಾಜ್ಯದ 19 ಜಿಲ್ಲೆಗಳಲ್ಲಿ ಭಾರಿ ಮಳೆ: ಅಲರ್ಟ್ ಘೋಷಣೆ

ಬೆಂಗಳೂರು: ಕರ್ನಾಟಕದಲ್ಲಿ ಮಳೆಯ ಅಬ್ಬರ ಮತ್ತೆ ಜೋರಾಗಿದೆ. ಮುಂದಿನ ಮೂರು ದಿನಗಳ ಕಾಲ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ಸೇರಿದಂತೆ 19 ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಬಾಗಲಕಕೋಟೆ , ಹಾಸನ, ಕೊಪ್ಪಳ ಹಾಗೂ ಕೊಡಗು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದ್ದು, ಆರೇಂಜ್ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಕಲಬುರಗಿ, ರಾಯಚೂರು, ಯಾದಗಿರಿ, ಚಾಮರಾಜನಗರ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ,ಬೆಂಗಳೂರು, ರಾಮನಗರ, ಮಂಡ್ಯ, ಮೈಸೂರು, ವಿಜಯನಗರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular