HomeLatest NewsRAIN ALERT: ಮುಂದಿನ 48 ಗಂಟೆಗಳ ಕಾಲ ಭಾರಿ ಮಳೆ ಮುನ್ಸೂಚನೆ: ರಾಜ್ಯದ ಹಲವು ಜಿಲ್ಲೆಗಳಲ್ಲಿ...

RAIN ALERT: ಮುಂದಿನ 48 ಗಂಟೆಗಳ ಕಾಲ ಭಾರಿ ಮಳೆ ಮುನ್ಸೂಚನೆ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ವರುಣಾರ್ಭಟ ಜೋರಾಗಿದೆ. ಮುಂದಿನ 48 ಗಂಟೆಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಧಾರಾಕಾರ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಧಾರವಾಡ, ಗದಗ, ಹಾವೇರಿ, ಚಿತ್ರದುರ್ಗ, ಬಳ್ಳಾರಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ಆರೇಂಜ್ ಅಲರ್ಟ್ ಘೋಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಾಸನ, ಕೋಲಾರ, ವಿಜಯನಗರ, ದಾವಣಗೆರೆ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರಿನಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಮಳೆಯಾಗುತ್ತಿದ್ದು, ಆಗಸ್ಟ್ 10ರವರೆಗೂ ಮಳೆ ಅಬ್ಬರ ಮುಂದುವರೆಯಲಿದೆ ಎಂದು ಮಾಹಿತಿ ನೀಡೀದೆ.

For Latest News Updates, Join Our Whatsapp Community🚩
RELATED ARTICLES

Most Popular