HomeKarnatakaರಾಜ್ಯದ ಹಲವೆಡೆ ಇಂದಿನಿಂದ ಮಳೆ ಸಾಧ್ಯತೆ:ಮಾರ್ಚ್ 21ರವರೆಗೆ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

ರಾಜ್ಯದ ಹಲವೆಡೆ ಇಂದಿನಿಂದ ಮಳೆ ಸಾಧ್ಯತೆ:ಮಾರ್ಚ್ 21ರವರೆಗೆ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ತೀವ್ರ ಬಿಸಿಲಿನ ಝಳಕ್ಕೆ ಕಂಗಾಲಾಗಿದ್ದ ಕರ್ನಾಟಕದ ಜನತೆಗೆ ವರುಣದೇವ ಕೊನೆಗೂ ತಂಪೆರೆಯುವ ಮುನ್ಸೂಚನೆ ನೀಡಿದ್ದಾನೆ. ಕರಾವಳಿ, ಮಲೆನಾಡು ಹಾಗೂ ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಗುಡುಗು ಸಹಿತ ಬೇಸಿಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ಬೀಸುತ್ತಿದ್ದು, ಕರ್ನಾಟಕದ 6 ಜಿಲ್ಲೆಗಳಲ್ಲಿ 3 ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ನಿಮ್ಮ ಜಿಲ್ಲೆಯಲ್ಲಿ ಮಳೆ ಯಾವಾಗ?

ಮಾ. 16 ರಿಂದ 21 ದಕ್ಷಿಣ ಕನ್ನಡ, ಉಡುಪಿ, ಮೈಸೂರು, ಚಿಕ್ಕಮಗಳೂರು ಮತ್ತು ಬಾಗಲಕೋಟೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಾ. 16 (ಇಂದು ಮಾತ್ರ) ಕೊಪ್ಪಳ, ವಿಜಯಪುರ ಮತ್ತು ದಾವಣಗೆರೆ.

ಮುಂದಿನ 2 ದಿನಗಳು ಕೊಡಗು ಮತ್ತು ಹಾಸನ (ಸಕಲೇಶಪುರ ಭಾಗ).

ಮಾ. 18 ರಿಂದ (2 ದಿನ) ಬೆಳಗಾವಿ, ಧಾರವಾಡ ಮತ್ತು ಗದಗ.

ಮಾ. 19 ರಿಂದ (2 ದಿನ) ಚಿತ್ರದುರ್ಗ ಜಿಲ್ಲೆಯ ಸಾಧಾರಣ ಮಳೆ.

ಮಾ. 20 ರಿಂದ (2 ದಿನ) ಬೆಂಗಳೂರು ನಗರ, ಗ್ರಾಮಾಂತರ, ಬೀದರ್, ಕಲಬುರಗಿ ಮತ್ತು ರಾಯಚೂರು.

ನೆನ್ನೆ ಎಲ್ಲೆಲ್ಲಿ ಮಳೆಯಾಗಿದೆ?

ಭಾನುವಾರ ರಾಜ್ಯದ ಹಲವೆಡೆ ಈಗಾಗಲೇ ವರುಣನ ಆಗಮನವಾಗಿದೆ.

ಚಿಕ್ಕಮಗಳೂರು: ಮೂಡಿಗೆರೆ ಮತ್ತು ಎನ್.ಆರ್.ಪುರದಲ್ಲಿ ಆಲಿಕಲ್ಲು ಮಳೆಯಾಗಿದೆ. ಗಾಳಿಯ ಅಬ್ಬರಕ್ಕೆ ಮರವೊಂದು ಉರುಳಿ ಶೃಂಗೇರಿ ರಸ್ತೆಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತ್ತು.

ಉತ್ತರ ಕರ್ನಾಟಕ: ಬೆಳಗಾವಿ ನಗರ ಹಾಗೂ ಬೀದರ್ ಜಿಲ್ಲೆಯ ಔರಾದ್, ಭಾಲ್ಕಿ, ಬಸವಕಲ್ಯಾಣ ಸೇರಿದಂತೆ ಹಲವೆಡೆ ಉತ್ತಮ ಮಳೆಯಾಗಿದೆ.

ಧಾರವಾಡ: ಅನಿರೀಕ್ಷಿತ ಮಳೆಯಿಂದಾಗಿ ನಗರ ಪ್ರದೇಶಗಳು ತಂಪಾಗಿವೆ.

ಮಳೆಯ ಮುನ್ಸೂಚನೆ ಇದ್ದರೂ ರಾಜ್ಯದಲ್ಲಿ ಬಿಸಿಲಿನ ಪ್ರತಾಪ ಕಡಿಮೆ ಆಗಿಲ್ಲ. ಭಾನುವಾರ ಕಲಬುರಗಿಯಲ್ಲಿ 38.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗುವ ಮೂಲಕ ರಾಜ್ಯದಲ್ಲೇ ಅತಿ ಹೆಚ್ಚು ಬಿಸಿಲು ದಾಖಲಾದ ಜಿಲ್ಲೆಯಾಗಿದೆ. ಬೆಂಗಳೂರು ಮತ್ತು ಸುತ್ತಮುತ್ತಲ ಜಿಲ್ಲೆಗಳಲ್ಲಿ ಇಂದು ಮೋಡ ಕವಿದ ವಾತಾವರಣವಿದ್ದರೂ, ಮಳೆಯ ಅಬ್ಬರ ಮಾ. 20ರಿಂದ ಶುರುವಾಗುವ ಸಾಧ್ಯತೆಯಿದೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular