HomeKarnatakaರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಭಾರೀ ಮಳೆ; ಹಲವೆಡೆ ಆರೇಂಜ್ ಅಲರ್ಟ್ ಘೋಷಣೆ

ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಭಾರೀ ಮಳೆ; ಹಲವೆಡೆ ಆರೇಂಜ್ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಇನ್ನೂ ನಾಲ್ಕು ದಿನಗಳ ಕಾಲ ಮ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ. ಒಟ್ಟಾರೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೇ 23ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ.

For Latest News Updates, Join Our Whatsapp Community🚩
RELATED ARTICLES

Most Popular