HomeKarnatakaರಾಜ್ಯದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ರಾಜ್ಯದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಎರಡು ದಿನಗಳಿಂದ ಬಿಸಿಲ ಝಳ ಹೆಚ್ಚುತ್ತಿದೆ. ಈ ನಡುವೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ಸೇರಿದಂತೆ 15 ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಕಲಬುರಗಿಯಲ್ಲಿ 40.4 ಡಿಗ್ರಿ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಹೆಚ್ ಎ ಎಲ್ ನ್ಲ್ಲಿ 34.7 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಹೊನ್ನಾವರದಲ್ಲಿಯೂ 34.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular