HomeKarnatakaBIG NEWS: ಮತ್ತೆ ವಾಯುಭಾರ ಕುಸಿತ: ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

BIG NEWS: ಮತ್ತೆ ವಾಯುಭಾರ ಕುಸಿತ: ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತವಾಗಿದ್ದು, ಪರಿಣಾಮ ರಾಜ್ಯದ ಮೇಲೂ ಬೀರಲಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಕೋಲಾರ, ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ, ತುಮಕೂರು, ದಾವಣಗೆರೆ, ಹಾಸನ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ವಿಜಯನಗರ ಜಿಲ್ಲೆಗಳ್ಅಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ರಾಜ್ಯದಲ್ಲಿ ಚಳಿ ಪ್ರಮಾಣವು ಕಡಿಮೆಯಾಗುತ್ತಿದೆ. ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗವಿ, ಬಾಗಲಕೋಟೆ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲೆಗಳಲ್ಲಿ ಚಳಿ ಮುಂದುವರೆಯಲಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭಾಗಶಃ ಮೋಡಕವಿದ ವಾತಾವರಣವಿರಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular