HomeKarnatakaರಾಜ್ಯದ ಕೆಲ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ; 11 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ರಾಜ್ಯದ ಕೆಲ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ; 11 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬಿಸಿಗಾಳಿ, ತಾಪಮಾನ ಹೆಚ್ಚುತ್ತಿದ್ದರೆ, ಇನ್ನು ಕೆಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ದಕ್ಷಿಣ ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಬೆಳಗಾವಿ, ಬಾಗಲಕೋಟೆ, ಬೀದರ್, ಗದಗ, ಕಲಬುರ್ಗಿ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ದಾವಣಗೆರೆ, ಕೋಲಾರ, ತುಮಕೂರು, ವಿಜಯನಗರ ಜಿಲೆಗಳಲ್ಲಿ ಮಳೆಯಾಗಲಿದೆ.

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಯಚೂರು, ವಿಜಯಪುರ, ಬಾಗಲಕೋಟೆ, ಕಲಬುರ್ಗಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಬಿಸಿಗಾಳಿ ಹೆಚ್ಚುವ ಸಾಧ್ಯತೆಯೂ ಇದೆ.

For Latest News Updates, Join Our Whatsapp Community🚩
RELATED ARTICLES

Most Popular