HomeLatest NewsRAIN ALERT: ರಾಜ್ಯದ ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ; ಶಾಲೆ-ಕಾಲೇಜು, ಅಂಗನವಾಡಿಗಳಿಗೆ ರಜೆ

RAIN ALERT: ರಾಜ್ಯದ ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ; ಶಾಲೆ-ಕಾಲೇಜು, ಅಂಗನವಾಡಿಗಳಿಗೆ ರಜೆ

ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಜೋರಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಜುಲೈ 24ರವರೆಗೂ ವರುಣಾರ್ಭಟ ಹೆಚ್ಚಲಿದ್ದು, ಕೆಲ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ಕೊಡಗು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿಯೂ ಧಾರಾಕಾರ ಮಳೆಯಾಗಲಿದ್ದು, ಆರೇಂಜ್ ಅಲರ್ಟ್ ಘೋಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಕೋಲಾರ, ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಳಗಾವಿ, ಗದಗ, ಧಾರವಾಡ, ಚಿತ್ರದುರ್ಗ, ತುಮಕೂರು, ದಾವಣಗೆರೆ, ಕೊಪ್ಪಳ, ವಿಜಯಪುರ, ಹಾವೇರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಮಲೆನಾಡು ಪಶ್ಚಿಮ ಘಟ್ಟ ಭಾಗದಲ್ಲಿ ಭಾರಿ ಮಳೆಯಾಗಲಿದ್ದು, ಚಿಕ್ಕಮಗಳೂರು ಜಿಲ್ಲೆಗೆ ಐದು ದಿನಗಳ ಕಾಲ ಆರೇಂಜ್ ಅಲರ್ಟ್ ಘೋಷಿಸಲಾಗಿದೆ.

ಭಾರಿ ಮಳೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಕೊಡಗು ಜಿಲ್ಲೆಯ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಾದ್ಯಂತ ಅಂಗನವಾಡಿ ಕೇಂದ್ರ, ಪ್ರಾಥಮಿಕ, ಪ್ರೌಢ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಬಂಟ್ವಾಳ ತಾಲೂಕು ವ್ಯಾಪ್ತಿಯಲ್ಲಿ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ

For Latest News Updates, Join Our Whatsapp Community🚩
RELATED ARTICLES

Most Popular