ಬೆಂಗಳೂರು: ಮುಂಗಾರು ಮಳೆಯ ಅಬ್ಬರ ಜೋರಾಗಿದೆ. ಈ ನಡುವೆ ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ ಕರಾವಳಿಯ ಮೂರು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಗಾಳಿಯ ವೇಗ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬೀಸಲಿದೆ.
ಬೆಂಗಳೂರು, ರಾಮನಗರ, ಮೈಸೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನುಳಿದ ಜಿಲ್ಲೆಗಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.