HomeLatest NewsRAIN ALERT: ಚಂಡಮಾರುತ: ಬಿರುಗಾಳಿ ಸಹಿತ ಭಾರಿ ಮಳೆ ಮನ್ಸೂಚನೆ: ಕರಾವಳಿ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ

RAIN ALERT: ಚಂಡಮಾರುತ: ಬಿರುಗಾಳಿ ಸಹಿತ ಭಾರಿ ಮಳೆ ಮನ್ಸೂಚನೆ: ಕರಾವಳಿ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಂಡಿದ್ದು, ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ. ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಒಂದು ವಾರಗಳ ಕಾಲ ಕರ್ನಾಟಕದಾದ್ಯಂತ ಮಳೆ ಅಬ್ಬರಿಸಲಿದ್ದು, ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಆಗಸ್ಟ್ 19ರಿಂದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ಕೊಪ್ಪಳ, ವಿಜಯಪುರ, ವಿಜಯನಗರ, ಯಾದಗಿರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮೈಸೂರು ಜಿಲ್ಲೆಗಳಲ್ಲಿಯೂ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಾವಣಗೆರೆ ಜಿಲ್ಲೆಗೆ ಆರೇಂಜ್ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಚಾಮರಾಜನಗರ, ತುಮಕೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

For Latest News Updates, Join Our Whatsapp Community🚩
RELATED ARTICLES

Most Popular