HomeKarnatakaKarnataka Rain : ರಾಜ್ಯದಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆ : ಈ ಜಿಲ್ಲೆಗಳಿಗೆ...

Karnataka Rain : ರಾಜ್ಯದಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆ : ಈ ಜಿಲ್ಲೆಗಳಿಗೆ `ರೆಡ್ ಅಲರ್ಟ್’ ಘೋಷಣೆ

ಬೆಂಗಳೂರು : ರಾಜಧಾನಿ ಬೆಂಗಳೂರು ಸೇರಿದಂತೆ ಹಲವಡೆ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಭಾಗದಲ್ಲಿ ವರುಣಾರ್ಭಟಕ್ಕೆ ಜನಜೀವನ ಅಸ್ತವ್ಯಸ್ಥವಾಗಿದ್ದು, ಮುಂದಿನ 24 ಗಂಟೆಗಳಲ್ಲಿ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.  ಬೆಳಗಾವಿ, ಬೀದರ್, ಹಾವೇರಿ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular