HomeLatest NewsBIG NEWS: ಕರಾವಳಿ ಜಿಲ್ಲೆಗಳಲ್ಲಿ ಮತ್ತಷ್ಟು ಹೆಚ್ಚಲಿದೆ ವರುಣಾರ್ಭಟ: ರೆಡ್ ಅಲರ್ಟ್ ಘೋಷಣೆ

BIG NEWS: ಕರಾವಳಿ ಜಿಲ್ಲೆಗಳಲ್ಲಿ ಮತ್ತಷ್ಟು ಹೆಚ್ಚಲಿದೆ ವರುಣಾರ್ಭಟ: ರೆಡ್ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಇನ್ನೆರಡು ದಿನಗಳಲ್ಲಿ ಅಮಳೆಯ ಅಬ್ಬರ ಜೋರಾಗಲಿದೆ. ಅದರಲ್ಲಿಯೂ ಕರಾವಳಿ ಜಿಲ್ಲೆಗಳಲ್ಲಿ ವರುಣಾರ್ಭಟ ಮತ್ತಷ್ಟು ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ವಾವಳಿ ಜಿಲ್ಲೆಗಳಲ್ಲಿ ಮೇ 25ರಿಂದ ಮಳೆ ಹೆಚ್ಚಾಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಮೇ ಅಂತ್ಯದ ವೇಳೆಗೆ ಕರ್ನಾಟಕದಲ್ಲಿ ಮುಂಗಾರು ಮಳೆ ಆರಂಭವಾಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಂದು ಉತ್ತರ ಕನ್ನಡ, ಕಲಬುರಗಿ, ಯಾದಗಿರಿ, ಬೀದರ್ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಆರೇಂಜ್ ಅಲರ್ಟ್ ಘೋಷಿಸಲಾಗಿದೆ,

ವಿಜಯಪುರ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ವಿಜಯನಗರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಶಿವಮೊಗ್ಗ, ಕೊಡಗು, ಕೋಲಾರ, ಮೈಸೂರು, ಮಂಡ್ಯ, ತುಮಕೂರು, ಹಾಸನ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಯಚೂರು, ಕೊಪ್ಪಳ, ಹಾವೇರಿ, ಗದಗ, ಧಾರವಾಡ, ಬೆಳಗಾವಿಯಲ್ಲಿ ಒಣಹವೆ ಮುಂದುವರೆಯಲಿದೆ

For Latest News Updates, Join Our Whatsapp Community🚩
RELATED ARTICLES

Most Popular