HomeKarnatakaKarnataka Rain : ರಾಜ್ಯದಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆ : ಈ ಜಿಲ್ಲೆಗಳಿಗೆ...

Karnataka Rain : ರಾಜ್ಯದಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆ : ಈ ಜಿಲ್ಲೆಗಳಿಗೆ `ರೆಡ್-ಆರೆಂಜ್ ಅಲರ್ಟ್’ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆಯ ಆರ್ಭಟ ಶುರುವಾಗಿದ್ದು, ಇಂದಿನಿಂದ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದು ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು,  ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಸಮುದ್ರಕ್ಕಿಳಿಯದಂತೆ ಮೀನಿಗಾರರಿಗೆ ಎಚ್ಚರಿಕೆ ನೀಡಲಾಗಿದೆ. ನಾಳೆಯಿಂದ 2 ದಿನ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಇಂದು ಕರಾವಳಿ ಭಾಗದ 3 ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಶಿವಮೊಗ್ಗ, ವಿಜಯನಗರ, ವಿಜಯಪುರ, ದಾವಣಗೆರೆ, ಧಾರವಾಡ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆ ಅಬ್ಬರಿಸಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular