Karnataka Rain : ರಾಜ್ಯದಲ್ಲಿ ಇನ್ನೂ ಮೂರು ದಿನ `ವರುಣಾರ್ಭಟ’ : ಇಂದು ಈ ಜಿಲ್ಲೆಗಳಲ್ಲಿ `ಶಾಲಾ-ಕಾಲೇಜು’ಗಳಿಗೆ ರಜೆ ಘೋಷಣೆ

ಬೆಂಗಳೂರು: ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆ ಹೊರತುಪಡಿಸಿ ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಬಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳ ವ್ಯಾಪ್ತಿಯಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದ್ದು, ಸಮುದ್ರಕ್ಕೆ ಇಳಿಯದಂತೆ ಮುನ್ಸೂಚನೆ ನೀಡಲಾಗಿದೆ. ಸಮುದ್ರದಲ್ಲಿ 50 ಕಿಲೋಮೀಟರ್ ವರೆಗೂ ವೇಗದ ಗಾಳಿ ಬೀಸುವ ಸಾಧ್ಯತೆ ಇದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಕರಾವಳಿ ಭಾಗದಲ್ಲಿ ಮಳೆಯ ಆರ್ಭಟ ಸೋಮವಾರಕ್ಕೆ ಹೋಲಿಸಿದರೆ ಮಂಗಳವಾರ ಸ್ವಲ್ಪ ಕಡಿಮೆಯಾದರೂ ಬಿರುಗಾಳಿ ಸಹಿತ ಭಾರಿ ಮಳೆ ಆಗುವ ಸಂಭವ ಇದೆ. ಕರಾವಳಿ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಮಲೆನಾಡಿನ ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ನೀಡಲಾಗಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿಯೂ ಹೆಚ್ಚಿನ ಮಳೆಯಾಗುವ ಸಂಭವ ಇದೆ.

ಮಹಾಮಳೆಗೆ ಐವರು ಬಲಿ

ರಾಜ್ಯದಲ್ಲಿ ಮಳೆ ಸಂಬಂಧಿ ಅನಾಹುತಕ್ಕೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಬಿರಾಳದಲ್ಲಿ ಮನೆ ಕುಸಿದು ಬಸಮ್ಮ (35), ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಮಾಕನೂರು ಗ್ರಾಮದ ಬಳಿಯ ತುಂಗಾಭದ್ರಾ ನದಿಯಲ್ಲಿ ಮುಳುಗಿ ಮಂಜುನಾಥ್ ಬಸವರಾಜ ಆನಂದಿ (27), ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಹಳ್ಳಾಡಿಹರ್ಕಾಡಿಯಲ್ಲಿ ಗೋಕುಲ್ ದಾಸ್ (53) ಹಳ್ಳಕ್ಕೆ ಬಿದ್ದು ಮೃತಪಟ್ಟಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ರಾಮತೀರ್ಥ ಕೆರೆಯಲ್ಲಿ ಮುಳುಗಿ ಮಣಿಕಂಠ ಮಂಜುನಾಥ್ ನಾಯ್ಕ್ (17), ಬೈಂದೂರು ತಾಲೂಕಿನ ಅರಿಶಿನಗುಂಡಿ ಜಲಪಾತಕ್ಕೆ ಬಿದ್ದು ಭದ್ರಾವತಿಯ ಶರತ್ ಕುಮಾರ್ (23) ಸಾವನ್ನಪ್ಪಿದ್ದಾರೆ.

ಈ ಜಿಲ್ಲೆಗಳಲ್ಲಿ ಇಂದೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಉತ್ತರ ಕನ್ನಡ ಜಿಲ್ಲೆಯಲ್ಲಿ ಜುಲೈ 25 ರ ಇಂದೂ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಅಂಗನವಾಡಿ, ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶ ಹೊರಡಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಅಂಗನವಾಡಿಯಿಂದ ಪದವಿ‌ ಕಾಲೇಜುಗಳವರೆಗೆ ರಜೆ ಘೋಷಿಸಿ ದ‌ಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ಉಡುಪಿ ಹಾಗೂ ಕೊಡಗು ಜಿಲ್ಲೆಯಲ್ಲಿ ಕೂಡ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ.

ನಾಳೆ ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಅಪಾರ ಪ್ರಮಾಣದ ಹಾನಿ ಹಿನ್ನೆಲೆಯಲ್ಲಿ ನಾಳೆ ಸಂಜೆ 4 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ.

ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳೊಂದಿಗೆ ವಿಡಿಯೋ ಸಂವಾದದ ಮೂಲಕ ಸಭೆ ನಡೆಸಲಿದ್ದಾರೆ. ಮಳೆ ಹಾನಿ, ಬೆಳೆ ಪರಿಸ್ಥಿತಿಯ ಬಗ್ಗೆ ಸಿಎಂ ಮಾಹಿತಿ ಪಡೆಯಲಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read