ಬೆಂಗಳೂರು: ರಾಜ್ಯದಲ್ಲಿ ಚಳಿ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಅದರಲ್ಲಿಯೂ ಉತ್ತರ ಕರ್ನಾಟಕ ಭಾಗದಲ್ಲಿ ಮೈಕೊರೆಯುವ ಚಳಿ ಆರಂಭವಾಗಿದೆ. ಈ ಮಧ್ಯೆ ಕೆಲ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಒಳನಾಡಿನ ಜಿಲ್ಲೆಗಳಾದ ರಾಅಯಚೂರು, ಯಾದಗಿರಿ, ಕೊಪ್ಪಳ, ಕಲಬುರಗಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕೊಡಗು, ಕೋಲಾರ, ಚಾಮರಾಜನಗರ, ಮೈಸೂರು ಸೇರಿದಂತೆ ಕೆಲ ಜಿಲ್ಲೆಗಳಲ್ಲಿಯೂ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರಲಿದೆ. ಧಾರವಾಡ, ಗದಗ, ಹಾವೇರಿ, ವಿಜಯಪುರ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ. ಬೀದರ್ ನಲ್ಲಿ ರಾಜ್ಯದಲ್ಲಿಯೇ ಅತ್ಯಂತ ಕನಿಷ್ಠ ತಾಪಮಾನ 10 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಉತ್ತರ ಕರ್ನಾಟಕ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮೈಕೊರೆಯುವ ಚಳಿ ಇದು, ತಾಪಮಾನ ಭಾರಿ ಏರಿಳಿತವಾಗುತ್ತಿದೆ.
