HomeKarnatakaಮೈ ಕೊರೆವ ಚಳಿ ನಡುವೆ ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಮೈ ಕೊರೆವ ಚಳಿ ನಡುವೆ ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮೈ ಕೊರೆವ ಚಳಿ, ಶೀತಗಾಳಿ ಮುಂದುವರೆದಿರುವಾಗಲೇ ಕೆಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಒಳನಾಡಿನಲ್ಲಿ ಭಾರಿ ಚಳಿ ಆರಂಭವಾಗಿದೆ. ಇಂದಿನಿಂದ ಚಳಿ ಪ್ರಮಾಣ ಮತ್ತಷ್ಟು ಹೆಚ್ಚಾಗಲಿದೆ. ವಿಜಯಪುರದಲ್ಲಿ 15 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಈ ನಡುವೆ ಚಿಕ್ಕಮಗಳೂರಿನ ಶೃಂಗೇರಿ, ಕೋಲಾರ ಜಿಲ್ಲೆಗಳಲ್ಲಿ ಮಳೆಯಾಗಿದೆ. ಕರ್ನಾಟಕದ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಹಾಗೂ ಕರಾವಳಿಯಲ್ಲಿ ಇಂದು ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ,ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರಿನಲ್ಲಿ ಮೋಡಕವಿದ ವಾತಾವರನ, ಆಗಾಗ ಬಿಸಿಲು ಹೀಗೆ ನೆರಳು ಬೆಲಕಿನ ಆಟ ಮುಂದುವರೆದಿದೆ. ಚಳಿಯೊಂದಿಗೆ ಬಿರುಗಾಳಿಯೂ ಬೀಸುತ್ತಿದೆ. ತುಮಕೂರು, ದಾವಣಗೆರೆ, ಶಿವಮೊಗ್ಗ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಬಾಗಲಕೋಟೆ, ಯಾದಗಿರಿ, ವಿಜಯನಗರ, ರಾಯಚೂರು, ಕೊಪ್ಪಳ, ಕಲಬುರಗಿ, ಗದ ಧಾರವಾಡ, ಬೀದರ್, ಬೆಳಗಾವಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.

For Latest News Updates, Join Our Whatsapp Community🚩
RELATED ARTICLES

Most Popular