HomeKarnatakaBIG NEWS: ಕೊರೆಯುವ ಚಳಿಯೊಂದಿಗೆ 11 ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

BIG NEWS: ಕೊರೆಯುವ ಚಳಿಯೊಂದಿಗೆ 11 ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಒಂದೆಡೆ ಮೈ ಕೊರೆವ ಚಳಿ, ಶೀತಗಾಳಿ ಆರಂಭವಾಗಿದೆ ಮತ್ತೊಂದೆ ಹವಾಮಾನ ಇಲಾಖೆ ಮಳೆ ಮುನ್ಸೂಚನೆ ನೀಡಿದೆ.

ದಕ್ಷಿಣ ಒಳನಾಡಿನಲ್ಲಿ ಮೋಡಕವಿದ ವಾತಾವರಣವಿದ್ದು, ಜನವರಿ 14ರಿಂದ 11 ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಮಂಡ್ಯ, ಮೈಸೂರು, ತುಮಕೂರು, ರಾಮನಗರ, ಕೋಲಾರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಬಾಗಲಕೋಟೆ, ಬೀದರ್, ಯಾದಗಿರಿ, ರಾಯಚೂರು, ಕಲಬುರಗಿ, ಗದಗ ಧಾರವಾಡ, ವಿಜಯಪುರ, ವಿಜಯನಗರಜಿಲ್ಲೆಗಳಲ್ಲಿ ಚಳಿ ಹಾಗೂ ಒಣಹವೆ ಮುಂದುವರೆಯಲಿವೆ.

 

For Latest News Updates, Join Our Whatsapp Community🚩
RELATED ARTICLES

Most Popular