HomeKarnatakaKarnataka Rain : ರಾಜ್ಯದಲ್ಲಿ ಇನ್ನೂ 2 ದಿನ ಭಾರೀ ಮಳೆ : ಈ ಜಿಲ್ಲೆಗಳಿಗೆ...

Karnataka Rain : ರಾಜ್ಯದಲ್ಲಿ ಇನ್ನೂ 2 ದಿನ ಭಾರೀ ಮಳೆ : ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳುರು : ಕರಾವಳಿ, ದಕ್ಷಿಣ ಒಳನಾಡು ಸೇರಿದಂತೆ ರಾಜ್ಯದ ಹಲವಡೆ ಇನ್ನೂ 2 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದು ಮತ್ತು ನಾಳೆ ದಕ್ಷಿಣ ಒಳನಾಡು ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಯಲ್ಲೂ ಕೂಡ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​​ ಘೋಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ, ಬಳ್ಳಾರಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಉತ್ತರಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲೂ ಭಾರಿ ಮಳೆಯಾಗಲಿದೆ. ಉತ್ತರ ಒಳನಾಡು ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular