HomeKarnatakaBIG NEWS: ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ: ಯೆಲ್ಲೋ ಅಲರ್ಟ್ ಘೋಷಣೆ

BIG NEWS: ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ: ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ ವಿವಿಧೆಡೆ ಮಳೆಯಾಗುತ್ತಿದ್ದು, ಏಪ್ರಿಲ್ 2ರಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳು, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗವ, ಧಾರವಾಡ, ಗದಗ, ಚಿಕ್ಕಮಗಳೂರು, ಹಾಸನ, ಕೊಡಗು, ಮಸೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಶಿವಮೊಗ್ಗ, ತುಮಕೂರು, ಚಿತ್ರದುರ್ಗ, ವಿಜಯನಗರ, ಮಂಡ್ಯ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿಇರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular