ಬೆಂಗಳೂರು: ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಆಗಸ್ಟ್ 16 ರಿಂದ 22 ರವರೆಗೆ ಕರಾವಳಿ ಕರ್ನಾಟಕದ ವಿವಿಧೆಡೆ ಸಾಧಾರಣ ಮಳೆಯ ಆಗಲಿದೆ. ಉತ್ತರ ಒಳನಾಡು ಮತ್ತು ಮಲೆನಾಡು ಸಹಿತ ದಕ್ಷಿಣ ಒಳನಾಡು ಜಿಲ್ಲೆಗಳ ಕೆಲವು ಭಾಗಗಳಲ್ಲಿ ಉತ್ತಮ ಮಳೆಯಾಗುವ ಸೂಚನೆ ಇದೆ.
ಆಗಸ್ಟ್ 17ರಂದು ಹಾವೇರಿ. ಬೆಳಗಾವಿ. ಧಾರವಾಡ. ಕೊಪ್ಪಳ. ಗದಗ ಜಿಲ್ಲೆಗಳ ಕೆಲವು ಕಡೆ ಸಾಧಾರಣ ಮಳೆ ಗಾಳಿ ಸಹಿತ ಮಳೆಯಾಗಲಿದೆ. ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ. ವಿಜಯಪುರ. ಕಲಬುರಗಿ, ಬಾಗಲಕೋಟೆ, ಬೀದರ್, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ನಿರಂತರ ಗಾಳಿ ಬೀಸುವ ಸಂಭವ ಇದೆ.
ಆಗಸ್ಟ್ 18ರಂದು ಬೆಳಗಾವಿ, ಹಾವೇರಿ, ಕೊಪ್ಪಳ, ಗದಗ, ಧಾರವಾಡ ಜಿಲ್ಲೆಗಳ ಕೆಲವು ಕಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವ ಇದೆ.
ಆಗಸ್ಟ್ 19 ರಿಂದ 22 ರವರೆಗೆ ಬಾಗಲಕೋಟೆ ಜಿಲ್ಲೆಯ ಕೆಲವು ಕಡೆ ಸಾಧಾರಣ ಮಳೆಯಾಗುವ ಸಂಭವವಿದ್ದು, ಬೀದರ್, ಗದಗ, ಹಾವೇರಿ, ಧಾರವಾಡ, ಬೆಳಗಾವಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ನಿರಂತರ ಗಾಳಿ ಸಹಿತ ಹಗುರದಿಂದ ಕೂಡಿದ ಸಾಧಾರಣ ಮಳೆ ಆಗಲಿದೆ.
ಆಗಸ್ಟ್ 17 ರಿಂದ 22 ರವರೆಗೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಬೆಂಗಳೂರು ದಕ್ಷಿಣ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸೂಚನೆಯಿದೆ.
ಕರಾವಳಿಯ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಆ. 22 ರವರೆಗೆ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

