Karnataka Rain : ರಾಜ್ಯದಲ್ಲಿ ನಿಲ್ಲದ ಮಳೆಯ ಅಬ್ಬರ : ಇಂದು ಈ ಜಿಲ್ಲೆಯ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆ ಆರ್ಭಟ ಮುಂದುವರೆದಿದ್ದು, ಹಲವಡೆ ಜನಜೀವನ ಅಸ್ಥವ್ಯಸ್ಥಗೊಂಡಿದೆ.ಮುನ್ನೆಚ್ಚರಿಕೆ ಕ್ರಮವಾಗಿ ಹಲವು ಜಿಲ್ಲೆಗಳಲ್ಲಿ ಇಂದು ಅಂಗನವಾಡಿ, ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ರಾಜ್ಯದಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ನಡುವೆ ಸತತ ಮಳೆಯಿಂದಾಗಿ ಹಲವು ನದಿಗಳು ತುಂಬಿ ಹರಿಯುತ್ತಿದ್ದು, ಸೇತುವೆಗಳು ಜಲಾವೃತವಾಗಿವೆ. ರಾಜ್ಯದ ವಿವಿಧೆಡೆ ಭಾರಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ವಿವಿಧ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ನೀಡಲಾಗಿದೆ.

ಯಾವ ಯಾವ ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ? ಇಲ್ಲಿದೆ ಮಾಹಿತಿ

ಶಿವಮೊಗ್ಗ ಜಿಲ್ಲೆ

ಶಿವಮೊಗ್ಗ ಜಿಲ್ಲೆಯಲ್ಲಿ ಅತೀ ಹೆಚ್ಚು ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಶಾಲಾ ಮಕ್ಕಳ ಸುರಕ್ಷತೆ ಹಿತದೃಷ್ಠಿಯಿಂದ ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಜು. 24 ರ ಇಂದು ಶಿವಮೊಗ್ಗ ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಸದರಿ ರಜೆಯನ್ನು ಮುಂದಿನ ರಜಾ ದಿನದಲ್ಲಿ ತರಗತಿ ನಡೆಸುವ ಮೂಲಕ ಶಾಲಾ ದಿನಗಳನ್ನು ಮರು ಹೊಂದಾಣಿಕೆ ಮಾಡಿಕೊಳ್ಳಲು ಶಾಲಾ ಮುಖ್ಯ ಶಿಕ್ಷಕರಿಗೆ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು(ಆಡಳಿತ) ಸೂಚಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆ

ಉತ್ತರ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಇಂದು ರಜೆ ನೀಡಿ ಪ್ರಭುಲಿಂಗ ಕವಲಿಕಟ್ಟಿ ಆದೇಶಿಸಿದ್ದಾರೆ.

ಬೆಳಗಾವಿ ಜಿಲ್ಲೆ

ಬೆಳಗಾವಿ ಜಿಲ್ಲೆಯ ಖಾನಾಪುರ, ಕಿತ್ತೂರು, ಬೆಳಗಾವಿ ನಗರ ಮತ್ತು ಗ್ರಾಮಾಂತರ ತಾಲೂಕುಗಳ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರೆದ ಕಾರಣ ಇಂದು ರಜೆ ನೀಡಿ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ ಪಾಟೀಲ್ ಆದೇಶ ಹೊರಡಿಸಿದ್ದಾರೆ. ಮಳೆ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಮೂರು ತಾಲೂಕಿನ ಶಾಲೆಗಳಿಗೆ ಇಂದು ಒಂದು ದಿನ ರಜೆ ನೀಡಲಾಗಿದೆ.

ಹಾಸನ ಜಿಲ್ಲೆ

ಹಾಸನ ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಸಕಲೇಶಪುರ, ಆಲೂರು, ಬೇಲೂರು, ಅರಕಲಗೂಡು, ಹಾಸನ ತಾಲೂಕಿನದ್ಯಂತ ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. 5 ತಾಲೂಕಿನ ಪ್ರಾಥಮಿಕ, ಪ್ರೌಢಶಾಲೆ, ಅಂಗನವಾಡಿಗಳಿಗೆ ರಜೆ ನೀಡಲಾಗಿದೆ. ಹಾಸನ ಜಿಲ್ಲಾಧಿಕಾರಿ ಸತ್ಯಭಾಮಾ ಅವರು ಇಂದು ರಜೆ ನೀಡಿ ಆದೇಶ ಹೊರಡಿಸಿದ್ದಾರೆ.

ಕೊಡಗು ಜಿಲ್ಲೆ

ಕೊಡಗು ಜಿಲ್ಲೆಯಲ್ಲಿಯೂ ಇಂದು ಶಾಲೆಗಳಿಗೆ ರಜೆ ನೀಡಲಾಗಿದೆ. ಭಾರಿ ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾಧಿಕಾರಿ ವೆಂಕಟರಾಜಾ ಇಂದು ರಜೆ ನೀಡಿ ಆದೇಶ ಹೊರಡಿಸಿದ್ದಾರೆ.

ಹಾವೇರಿ ಜಿಲ್ಲೆ

ಹಾವೇರಿ ಜಿಲ್ಲೆಯಾದ್ಯಂತ ಭಾರಿ ಮಳೆ ಮುಂದುವರಿದ ಹಿನ್ನೆಲೆ ಇಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪಿಯುಸಿ ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಬಗ್ಗೆ ಆದೇಶ ಹೊರಡಿಸಿದ ಜಿಲ್ಲಾಧಿಕಾರಿ ರಘುನಂದನ ಮೂರ್ತಿ, ಪದವಿ ಮತ್ತು ಐಟಿಐ ಕಾಲೇಜುಗಳು ಎಂದಿನಂತೆ ನಡೆಯಲಿವೆ ಎಂದು ಸೂಚಿಸಿದ್ದಾರೆ.

ಉಡುಪಿ ಜಿಲ್ಲೆ

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ, ಬೈಂದೂರು ತಾಲೂಕಿನ ಶಾಲೆಗಳು, ಪಿಯುಸಿ ಕಾಲೇಜುಗಳಿಗೆ ಇಂದು ರಜೆಯನ್ನು ಘೋಷಿಸಲಾಗಿದೆ.

ಧಾರವಾಡ ಜಿಲ್ಲೆ

ಧಾರವಾಡ ಜಿಲ್ಲೆಯಾದ್ಯಂತೆ ನಿರಂತರವಾಗಿ ಮಳೆಯಾಗುತ್ತಿದ್ದು ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಜಿಲ್ಲೆಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜುಲೈ 24 ರ ಇಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶ ಹೊರಡಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ಅದರಲ್ಲಿಯೂ ಕೊಪ್ಪ ತಾಲೂಕಿನಲ್ಲಿ ಬಿಟ್ಟುಬಿಡದೇ ಮಳೆ ಸುರಿಯುತ್ತಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಇಂದು ಕೊಪ್ಪ ತಾಲೂಕಿನ‌ ಶಾಲಾ‌-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read