HomeKarnatakaKarnataka Rain : ರಾಜ್ಯದಲ್ಲಿ ಇಂದು ಭಾರೀ ಮಳೆ : 16 ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’...

Karnataka Rain : ರಾಜ್ಯದಲ್ಲಿ ಇಂದು ಭಾರೀ ಮಳೆ : 16 ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಹಲವಡೆ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜುಲೈ 23 ರ ಇಂದು ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, 16 ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆ, ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬೆಳಗಾವಿ, ಬಾಗಲಕೋಟೆ, ವಿಜಯಪುರ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ರಾಯಚೂರು, ಕಲಬುರಗಿ, ಬೀದರ್, ಯಾದಗಿರಿ, ಗದಗ ಚಿತ್ರದುರ್ಗ, ಬಳ್ಳಾರಿ, ವಿಜಯನಗರ ಮತ್ತು ಮೈಸೂರು ಜಿಲ್ಲೆಗಳಲ್ಲಿ  ಇಂದು ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular