HomeKarnatakaKarnataka Rain : ರಾಜ್ಯದ ಹಲವಡೆ ಇಂದು ಭಾರೀ ಮಳೆ : ಕರಾವಳಿ ಜಿಲ್ಲೆಗಳಿಗೆ `ಯೆಲ್ಲೋ...

Karnataka Rain : ರಾಜ್ಯದ ಹಲವಡೆ ಇಂದು ಭಾರೀ ಮಳೆ : ಕರಾವಳಿ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ರಾಜ್ಯದ ಹಲವಡೆ ಮಳೆಯ ಅಬ್ಬರ ಕಡಿಮೆಯಾಗಿದ್ದು, ಇಂದು ಮತ್ತು ನಾಳೆ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕಳೆದೊಂದು ವಾರದಿಂದ ರಾಜ್ಯಾದ್ಯಂತ ಅಬ್ಬರಿಸಿದ್ದ ಮಳೆ ಸ್ವಲ್ಪ ಮಟ್ಟಿಗೆ ಕಡಿಮೆ ಆಗಲಿದ್ದು, ಮುಂದಿನ ಒಂದು ವಾರ ಸಾಧಾರಣ ಮಳೆ ಆಗಲಿದೆ. ಆದರೆ ಕರಾವಳಿಯ ಮೂರು ಜಿಲ್ಲೆಗಳಿಗೆ ಇಂದು ಹಾಗೂ ಆಗಸ್ಟ್ 1 ಹಾಗೂ 2 ರಂದು ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸುಮಾರು 12 ದಿನಗಳ ಬಳಿಕ ಕರಾವಳಿ ಜಿಲ್ಲೆಗಳು ಹಾಗೂ ಮಲೆನಾಡಿನಲ್ಇ ಮಳೆಯ ಅಬ್ಬರ ಸಂಪೂರ್ಣ ಇಳಿದಿದ್ದು, ಶುಕ್ರವಾರ ಬಿಸಿಲಿನ ದರ್ಶನವಾಗಿದೆ. ಹಲವು ನದಿಗಳ ಪ್ರವಾಹ ಇಳಿಕೆಯಾಗಿದ್ದು, 12 ರಿಂದ 14 ಸೇತುವೆಗಳು ಬಹುತೇಕ ಇಂದು ಸಂಚಾರಕ್ಕೆ ಮುಕ್ತವಾಗುವ ನಿರೀಕ್ಷೆ ಇದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular